ಪುಷ್ಪ 2 ಸಿನಿಮಾದ ಸಕ್ಸಸ್ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
5ರಂದು ಪುಷ್ಪ 2 ರಿಲೀಸ್ ಆಗಿರುವ ಸಂದರ್ಭ ಸಂಧ್ಯ ಥಿಯೇಟರ್ನಲ್ಲಿ ನೂಕುನುಗ್ಗಲು ಉಂಟಾಗಿ ಮಹಿಳೆ ಮೃತಪಟ್ಟಿದ್ದರು. ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.
ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ವಿಧಾನಸಭೆಯಲ್ಲಿ ಕೈ-ಕಮಲ ಕೋಲಾಹಲ – ಅಶೋಕ್ ನೇತೃತ್ವದಲ್ಲಿ ಸದನದಿಂದ ಹೊರ ನಡೆದ ಬಿಜೆಪಿ ಸದಸ್ಯರು..!
Post Views: 1,728