ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ರಜತ್ ಅವರ ಆರ್ಭಟ ಜೋರಾಗಿದೆ. ಮಾತಿನ ಮೇಲೆ ನಿಗಾ ಇರಲಿ ಎಂದು ರಜತ್ಗೆ ಕಿಚ್ಚ ಸುದೀಪ್ ವಾರ್ನಿಂಗ್ ಕೂಡ ಕೊಟ್ಟಿದ್ದರು. ಆದರೆ, ಈ ಮಾತುಗಳಿಗೆ ರಜತ್ ಬೆಲೆ ಕೊಡದೆ ಮತ್ತೆ ಎಲ್ಲರ ಜೊತೆ ಜಗಳವಾಡುತ್ತಲೇ ಇದ್ದಾರೆ.
ಬಿಗ್ ಬಾಸ್ ಒಂದು ಟಾಸ್ಕ್ ನೀಡಿತ್ತು. ಆ ಟಾಸ್ಕ್ ಅಲ್ಲಿ ಗೆದ್ದ ತಂಡ ತಮ್ಮೊಳಗೆ ಚರ್ಚಿಸಿ ಒಬ್ಬರನ್ನು ನೇರವಾಗಿ ನಾಮಿನೇಟ್ ಮಾಡಬೇಕಿತ್ತು. ಆಗ ತ್ರಿವಿಕ್ರಮ್ ತಂಡ ರಜತ್ ಅವರನ್ನು ನೇರವಾಗಿ ನಾಮಿನೇಟ್ ಮಾಡಿದೆ.
ಇಲ್ಲಿ ಎಲ್ಲರನ್ನು ವೈಯಕ್ತಿಕವಾಗಿ ಆಡಿ ಎಂದು ಪ್ರವೋಕ್ ಮಾಡುತ್ತಾರೆ. ಅವರನ್ನೇ ಅವರು ಮೇಲು ಅಂದುಕೊಂಡಿದ್ದಾರೆ ಎಂದು ತ್ರಿವಿಕ್ರಮ್ ಕಾರಣ ಕೊಟ್ಟರು. ಅದಕ್ಕೆ ರಜತ್ ಅವರು ನಾನೇ ಹೀರೋ, ನಾನೇ ಕರಾಬು, ನಾಮಿನೇಟ್ ಮಾಡಿ ಬಿಟ್ರೆ ಚೇಂಜ್ ಆಗ್ತೀನಾ ನಾನು? ಬೇರೆಯವರನಾ ಹೀರೋ ಅಂತಿನಾ? ಎಂದು ಅಬ್ಬರಿಸಿದ್ದಾರೆ.
ಇದನ್ನೂ ಓದಿ : ನಗು ನಗುತ್ತ ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ – 6 ತಿಂಗಳ ಬಳಿಕ ಪರಪ್ಪನ ಅಗ್ರಹಾರದಿಂದ ಮುಕ್ತಿ..!