ಅಮೇರಿಕ ದೇಶದ ನ್ಯೂಯಾರ್ಕ್-ನ್ಯೂಜೆರ್ಸಿ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಇಂದು ‘ಶ್ರಾವಣ ಅಮಾವಾಸ್ಯೆ’ಯನ್ನು ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಅಭಿಷೇಕವನ್ನು ಮಾಡುವುದರ ಮೂಲಕ ಆಚರಿಸಲಾಯಿತು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ನಿರ್ಮಲನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಅಭಿಷೇಕ ಮಾಡಲಾಯ್ತು.
ಶ್ರೀ ಕ್ಷೇತ್ರ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಮತ್ತು ಮೈಸೂರು ಶಾಖೆಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಅಮವಾಸ್ಯೆಯ ಪೂಜೆ ನೆರವೇರಿಸಲಾಯ್ತು. ಈ ಅಮೃತ ಘಳಿಗೆಯಲ್ಲಿ ಹಲವಾರು ಭಕ್ತರು ಕುಟುಂಬ ಸಮೇತ ಭಾಗವಹಿಸಿ ಕಾಲಭೈರೇಶ್ವರನ ಕೃಪೆಗೆ ಪಾತ್ರರಾದರು.
ಇದನ್ನೂ ಓದಿ : ದಾವಣಗೆರೆ : ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾ*ವು..!
Post Views: 228