ಬೆಂಗಳೂರು : ವಿಧಾನಸಭೆ ಚುನಾವಣೆಯ ಬಳಿಕ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸುತ್ತೂರು ಜಾತ್ರಾ ಮಹೋತ್ಸವ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್ ಮಾಡಲಿದ್ದು, ಬೆಳಗ್ಗೆಯಿಂದ ಸಂಜೆವರೆಗೂ ಅಮಿತ್ ಶಾ ರಣತಂತ್ರ ನಡೆಸಲಿದ್ದಾರೆ. ಬಿಜೆಪಿ ಕ್ಲಸ್ಟರ್ ಮಟ್ಟದ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದು, ರಾಜ್ಯ ಕೋರ್ ಕಮಿಟಿ ಜತೆಯೂ ಚರ್ಚೆ ನಡಸಲಿದ್ದಾರೆ.
ಅಮಿತ್ ಶಾ ಲೋಕಸಭೆ ಎಲೆಕ್ಷನ್ ರಣತಂತ್ರ ರೂಪಿಸಲಿದ್ದು, ಫೆಬ್ರವರಿ 10ರ ಸಂಜೆ ಸುತ್ತೂರಿಗೆ ತೆರಳಲಿದ್ದಾರೆ. ಹಾಗೆಯೇ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ನಾಯಕರು ಈಗಾಗಲೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕಾರಿಣಿ ಸಭೆಗಳನ್ನು ನಡೆಸಿದ್ದಾರೆ. ಈ ಸಭೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ವಿಚಾರವಾಗಿ ನಾಯಕರು ಕಾರ್ಯಕರ್ತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಫೆಬ್ರವರಿ10 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಅವರ ಮುಂದೆ ವರದಿ ಒಪ್ಪಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಮಂಗಳೂರು : 42 ಅಕ್ರಮ ಸಿಮ್ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್..!