Download Our App

Follow us

Home » ರಾಜಕೀಯ » ಫೆಬ್ರವರಿ 10ರಂದು ರಾಜ್ಯಕ್ಕೆ ಅಮಿತ್​ ಶಾ ಭೇಟಿ – ಮಹತ್ವದ ಸಭೆ..!

ಫೆಬ್ರವರಿ 10ರಂದು ರಾಜ್ಯಕ್ಕೆ ಅಮಿತ್​ ಶಾ ಭೇಟಿ – ಮಹತ್ವದ ಸಭೆ..!

ಬೆಂಗಳೂರು : ವಿಧಾನಸಭೆ ಚುನಾವಣೆಯ ಬಳಿಕ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸುತ್ತೂರು ಜಾತ್ರಾ ಮಹೋತ್ಸವ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್​ ಮಾಡಲಿದ್ದು, ಬೆಳಗ್ಗೆಯಿಂದ ಸಂಜೆವರೆಗೂ ಅಮಿತ್​ ಶಾ ರಣತಂತ್ರ ನಡೆಸಲಿದ್ದಾರೆ. ಬಿಜೆಪಿ ಕ್ಲಸ್ಟರ್​ ಮಟ್ಟದ ಕಾರ್ಯಕ್ರಮದಲ್ಲಿ ಅಮಿತ್​ ಶಾ ಭಾಗಿಯಾಗಲಿದ್ದು, ರಾಜ್ಯ ಕೋರ್​​ ಕಮಿಟಿ ಜತೆಯೂ ಚರ್ಚೆ ನಡಸಲಿದ್ದಾರೆ.

ಅಮಿತ್​ ಶಾ ಲೋಕಸಭೆ ಎಲೆಕ್ಷನ್​​​ ರಣತಂತ್ರ ರೂಪಿಸಲಿದ್ದು, ಫೆಬ್ರವರಿ 10ರ ಸಂಜೆ ಸುತ್ತೂರಿಗೆ ತೆರಳಲಿದ್ದಾರೆ. ಹಾಗೆಯೇ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ನಾಯಕರು ಈಗಾಗಲೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕಾರಿಣಿ ಸಭೆಗಳನ್ನು ನಡೆಸಿದ್ದಾರೆ. ಈ ಸಭೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್​ ನೀಡಬೇಕು ಎಂಬ ವಿಚಾರವಾಗಿ ನಾಯಕರು ಕಾರ್ಯಕರ್ತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಫೆಬ್ರವರಿ10 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್​ ಶಾ ಅವರ ಮುಂದೆ ವರದಿ ಒಪ್ಪಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಮಂಗಳೂರು : 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಗ್ಯಾಂಗ್​​ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here