ಚಿಕ್ಕೋಡಿ : ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ಲೋಕಸಭೆ ಚುನಾವಣೆಯ ಕಾವು ಈಗ ರಾಜ್ಯದ ‘ಉತ್ತರ’ ಭಾಗಕ್ಕೆ ಶಿಫ್ಟ್ ಆಗಿದೆ. ಈಗಾಗಲೇ ಎರಡು ಪಕ್ಷದ ನಾಯರು ಪಕ್ಷದ ಅಭ್ಯರ್ಥಿಗಳ ಪರ ಮತಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅದರಲ್ಲೂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ಪಕ್ಷ ಭರ್ಜರಿ ತಂತ್ರಗಾರಿಗೆ ರೂಪಿಸುತ್ತಿದೆ.
ಕಳೆದೆರಡು ದಿನಗಳ ಹಿಂದೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಕರ್ನಾಟಕ ಭಾಗದಲ್ಲಿ ಮತ ಸೆಳೆಯಲು ಹಾವೇರಿ, ಧಾರವಾಡಕ್ಕೆ ಭೇಟಿ ನೀಡಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೆ ಇಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ ಕೊಡಲಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಮತ ಸೆಳೆಯಲು ಪದೇ- ಪದೇ ರಾಜ್ಯಕ್ಕೆ ಎಂಟ್ರಿ ಕೊಡ್ತಿರೋ ಅಮಿತ್ ಶಾ, ಇಂದು ಚಿಕ್ಕೊಡಿಯ ಹುಕ್ಕೇರಿಯಗೆ ಭೇಟಿ ನೀಡಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಪರ ಪ್ರಚಾರ ಮಾಡಲಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ : ಅಪ್ಪ-ಮಗನಿಗೆ SIT ರೇಡ್ ಶಾಕ್..!