Download Our App

Follow us

Home » ರಾಜಕೀಯ » ರಾಜ್ಯದಲ್ಲಿಂದು ಅಮಿತ್‌ ಶಾ ಲೋಕಸಭೆ ಪ್ರಚಾರದ ರಣಕಹಳೆ – ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ಚುನಾವಣಾ ಚಾಣಕ್ಯ..!

ರಾಜ್ಯದಲ್ಲಿಂದು ಅಮಿತ್‌ ಶಾ ಲೋಕಸಭೆ ಪ್ರಚಾರದ ರಣಕಹಳೆ – ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ಚುನಾವಣಾ ಚಾಣಕ್ಯ..!

ಬೆಂಗಳೂರು : ರಾಜ್ಯದಲ್ಲಿಂದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಲೋಕಸಭಾ ಪ್ರಚಾರದ ರಣಕಹಳೆ ಮೊಳಗಿಸಲಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿನಾಯಕರ ಅದ್ದೂರಿ ಪ್ರಚಾರಕ್ಕೆ ಅಮಿತ್ ಶಾ ಇಂದು ಚಾಲನೆ ನೀಡಲಿದ್ದು, ಅದಕ್ಕಾಗಿಯೆ ಕಳೆದ ರಾತ್ರಿ 11 ಗಂಟೆಗೆ‌ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದಿಳಿದಿದ್ದಾರೆ.

ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದು, ಇಂದು ಬೆಳಿಗ್ಗೆ 9 ಗಂಟೆಗೆ ವೆಸ್ಟ್ ಎಂಡ್ ನಲ್ಲಿ ಮೈತ್ರಿ ನಾಯಕರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್​ನಲ್ಲಿ ಮಾಜಿ ಸಿಎಂಗಳಾದ ಯಡಿಯೂರಪ್ಪ, ಹೆಚ್​.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌, ವಿಪಕ್ಷ ನಾಯಕ ಆರ್ ಅಶೋಕ್ ಸೇರಿ ಪ್ರಮುಖರು ಭಾಗಿಯಾಗಲಿದ್ದಾರೆ.

ತಾಜ್ ವೆಸ್ಟೆಂಡ್ ನಲ್ಲಿ 9 ಗಂಟೆಯಿಂದ 10.30ರ ವರೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಕ್ಷೇತ್ರವಾರು ಗ್ರೌಂಡ್ ರಿಪೋರ್ಟ್, ಮೈತ್ರಿಯ ಹೊಂದಾಣಿಕೆ, ಪ್ರಚಾರದ ರೂಪುರೇಷೆ ಬಗ್ಗೆ ಮೈತ್ರಿ ನಾಯಕರ ಜೊತೆ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಪ್ಯಾಲೇಸ್ ಗ್ರೌಂಡ್ ನಲ್ಲಿ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಬೂತ್ ಪ್ರಮುಖರ ಸಮಾವೇಶ ನಡೆಯಲಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಸಮಾಧಾನಿತರ ಬಂಡಾಯ ಶಮನಕ್ಕೆ ಮುಂದಾಗಿದ್ದು, ಮಧ್ಯಾಹ್ನ 3 ಗಂಟೆಗೆ ಖಾಸಗಿ ಹೊಟೇಲಿನಲ್ಲಿ ಅಸಮಾಧಾನಿತ ಕ್ಷೇತ್ರಗಳಾದ ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಕ್ಷೇತ್ರಗಳ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.

ಅದಾದ ಬಳಿಕ ಡಿಕೆಶಿ ಬ್ರದರ್ಸ್ ಕೋಟೆಯಲ್ಲಿ ಚುನಾವಣಾ ಚಾಣಕ್ಯ ಮೆಗಾ ರೋಡ್ ಶೋ ನಡೆಸಲಿದ್ದು, ಸಂಜೆ 6 ಗಂಟೆಗೆ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಅಮಿತ್ ಶಾರಿಂದ ಭರ್ಜರಿ ಪ್ರಚಾರ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್ ಪರ ಅಮಿತ್ ಶಾ 1.5 ಕಿ.ಮೀ ಬೃಹತ್ ರೋಡ್ ಶೋ ಮಾಡಿ ಮತಬೇಟೆ ಮುಂದುವರೆಸಲಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರು ರೋಡ್ ಶೋನಲ್ಲಿ ಭಾಗವಹಿಸಲಿದ್ದು, ರಾತ್ರಿ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿ. ನಾಳೆ ಬೆಳಗ್ಗೆ 9.50ಕ್ಕೆ ಶಾ ದೆಹಲಿಗೆ ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ 81ನೇ ವರ್ಷದ ಶ್ರೀ ಅಖಿಲ ಹವ್ಯಕ ಮಹಾಸಭೆಯ ಸಂಸ್ಥಾಪನೋತ್ಸವ ಹಾಗೂ ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here