Download Our App

Follow us

Home » Uncategorized » ಬಾಲಿವುಡ್ ನಟ ಅಮಿತಾಭ್ ಬಚ್ಚನ್‌ಗೆ ಅನಾರೋಗ್ಯ – ದಿಢೀರನೇ ಆಸ್ಪತ್ರೆಗೆ ದಾಖಲು..!

ಬಾಲಿವುಡ್ ನಟ ಅಮಿತಾಭ್ ಬಚ್ಚನ್‌ಗೆ ಅನಾರೋಗ್ಯ – ದಿಢೀರನೇ ಆಸ್ಪತ್ರೆಗೆ ದಾಖಲು..!

ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಇಂದು ಬೆಳ್ಳಂಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗಿದೆ. ಅಮಿತಾಭ್ ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

ಅಮಿತಾಭ್ ಮೊನ್ನೆಯಷ್ಟೇ ಕಲ್ಕಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಮುಂಬೈಗೆ ಆಗಮಿಸಿದ್ದರು. ಸತತವಾಗಿ ಕಲ್ಕಿ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಅವರು, ದಿಢೀರ್ ಅಂತ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಿಗ್ಗಜರೇ ಒಂದಾಗಿ ನಟಿಸುತ್ತಿರುವ ಕಲ್ಕಿ ಸಿನಿಮಾದ ಬಗ್ಗೆ ಬಿಗ್ ಬಿ, ಎರಡು ದಿನದ ಹಿಂದೆಯಷ್ಟೇ ಬಿಗ್ ಅಪ್ ಡೇಟ್ ನೀಡಿದ್ದರು. ಸಿನಿಮಾ ಶೂಟಿಂಗ್ ಕುರಿತಂತೆ ಅಮಿತಾಭ್ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. “ಮೊನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದೆ. ಚಿತ್ರದ ಚಿತ್ರೀಕರಣ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ರಿಲೀಸ್ ಆಗಲಿದೆ” ಎಂದು ಅವರು ಮಾಹಿತಿಯನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ : ಕರ್ನಾಟಕದ ರಸ್ತೆ ಯೋಜನೆಗಳಿಗೆ 1385 ಕೋಟಿ ರೂ. ಅನುದಾನ ಮಂಜೂರು : ಸಚಿವ ನಿತಿನ್ ಗಡ್ಕರಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here