Download Our App

Follow us

Home » ರಾಜಕೀಯ » ಇಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ – ತೇಜಸ್ವಿ ಸೂರ್ಯ ಪರ ರೋಡ್ ಶೋ..!

ಇಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ – ತೇಜಸ್ವಿ ಸೂರ್ಯ ಪರ ರೋಡ್ ಶೋ..!

ಬೆಂಗಳೂರು : ಲೋಕಸಭಾ ಚುನಾವಣಾ ಪ್ರಚಾರ ಹಿನ್ನೆಲೆ ಇಂದು ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭರ್ಜರಿ ರೋಡ್​ ಶೋ ನಡೆಸಲಿದ್ದಾರೆ.

ಈ ಮೊದಲು ಅವರು ಬೆಂಗಳೂರಿನ ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಮೂರು ಕ್ಷೇತ್ರಗಳಲ್ಲಿ ರೋಡ್​ ಶೋ ನಡೆಸಲಿದ್ದಾರೆ ಎಂದು ತಿಳಿಸಲಾಗಿತ್ತು. ಆದರೆ, ಈ ವೇಳಾಪಟ್ಟಿಯಲ್ಲಿ ಇದೀಗ ಸ್ವಲ್ಪ ಬದಲಾವಣೆ ಆಗಿದೆ.

ಅದರ ಅನುಸಾರ, ಅಮಿತ್ ಶಾ ಒಂದು ಕ್ಷೇತ್ರದಲ್ಲಿ ಮಾತ್ರ ರೋಡ್​ ಶೋ ನಡೆಸಲಿದ್ದಾರೆ. ಇಂದು ನಗರಕ್ಕೆ ಆಗಮಿಸಲಿರುವ ಶಾ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ರೋಡ್​ ಶೋ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ರೋಡ್​ ಶೋ ನಡೆಸುವ ಮೂಲಕ ಮತಯಾಚಿಸಲಿದ್ದಾರೆ.

ಹೊಸ ವೇಳಾಪಟ್ಟಿ ಪ್ರಕಾರ, ಇಂದು ಸಂಜೆ 7 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆ. ರೋಡ್​ ಶೋ 7.30ಕ್ಕೆ ಆರಂಭವಾಗಲಿದೆ‌. ಬೊಮ್ಮನಹಳ್ಳಿ ಸರ್ಕಲ್ ನಿಂದ ಹೊರಟು ಐಐಎಂಬಿ ಬನ್ನೇರುಘಟ್ಟ ರಸ್ತೆ, ಬಿಳೇಕಹಳ್ಳಿವರೆಗೂ ರೋಡ್ ಶೋ ನಡೆಸಲಿರುವ ಅಮಿತ್ ಶಾ, ರಾತ್ರಿ 8.30ರ ವರೆಗೂ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ಹೆಚ್ಎಎಲ್​ಗೆ ತೆರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ : ಡಿಫರೆಂಟ್ ಲುಕ್​ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡ ಡಿಸಿಎಂ ಡಿಕೆ ಶಿವಕುಮಾರ್ ಪುತ್ರಿ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here