ಬೀದರ್ : ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿವೆ. ಇತ್ತ ಕರ್ನಾಟಕದಲ್ಲೂ ಆಕ್ರೋಶ ಭುಗಿಲೆದ್ದಿದೆ.
ಈ ಹಿನ್ನೆಲೆ ಇಂದು ವಿವಿಧ ಸಂಘಟನೆಗಳು ಬೀದರ್ ಬಂದ್‌ಗೆ ಕರೆ ನೀಡಿವೆ. ಮುಂಜಾಗ್ರತಾ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶ ಹಿನ್ನಲೆ ಬೀದರ್ ತಾಲೂಕಿನ ಶಾಲಾ-ಕಾಲೇಜುಗಳಿಗೆ ಡಿಡಿಪಿಐ ಎಸ್.ಎಸ್.ಕೆಳದಿಮಠ ಇಂದು ರಜೆ ಘೋಷಣೆ ಮಾಡಿದ್ದಾರೆ. ಬೀದರ್ ತಾಲೂಕು ಹೊರತು ಪಡಿಸಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯ ನಿರ್ವಹಿಸಲಿದೆ. ಇಂದು ರಜೆ ಪರಿಣಾಮ ಮುಂದಿನ ದಿನಗಳಲ್ಲಿ ಎರಡನೇ ಶನಿವಾರ ಪೂರ್ಣಾವಧಿ ಶಾಲೆ ನಡೆಸಲು ಸೂಚನೆ ನೀಡಲಾಗಿದೆ.
ಇನ್ನು ಇಂದು (ಜ.09) ಬೆಳಿಗ್ಗೆ ರಿಂದ ಸಂಜೆ 6 ವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಬಂದ್‌ಗೆ ನಗರದ ಬಾರ್, ಹೋಟೆಲ್, ಬೇಕರಿ ಮಾಲೀಕರು ಹಾಗೂ ವ್ಯಾಪಾರಸ್ಥರಿಂದಲೂ ಬೆಂಬಲ ಸಿಕ್ಕಿದೆ. ಜೊತೆಗೆ ಸ್ವಯಂ ಪ್ರೇರಿತ ಬೆಂಬಲ ನೀಡುವಂತೆಯೂ ಮನವಿ ಮಾಡಲಾಗಿದೆ.
ಇದನ್ನೂ ಓದಿ : “ಫಾರೆಸ್ಟ್”ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಫ್ಯಾನ್ಸ್ ಫಿದಾ – ಅಡ್ವೆಂಚರ್ಸ್ ಕಾಮಿಡಿಯ ಸಿನಿಮಾ ಜನವರಿ 24ಕ್ಕೆ ರಿಲೀಸ್!