ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶದ ಸಿಎಂ ಎನ್ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ಜಗನ್ಮೋಹನ್ ಸರ್ಕಾರ ಇದ್ದಾಗ ಲಡ್ಡು ತಯಾರಿಸುವಾಗ ಪ್ರಾಣಿಗಳ ಕೊಬ್ಬು ಬಳಕೆ ಮಾಡ್ತಿದ್ದರು. ಶ್ರೀವಾರಿಗೆ ಕೊಬ್ಬು ಮಿಶ್ರಿತ ಲಡ್ಡನ್ನೇ ಪ್ರಸಾದವಾಗಿ ಅರ್ಪಿಸುತ್ತಿದ್ದರು. ತಿಮ್ಮಪ್ಪನ ಸನ್ನಿಧಿಗೆ ಬರುವ ಭಕ್ತರಿಗೂ ಇದೇ ಲಡ್ಡು ಪ್ರಸಾದವಾಗಿ ನೀಡ್ತಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಜಗನ್ ಸರ್ಕಾರ ಮಾಡಿತ್ತು, ಈಗ ನಾವು ಶುದ್ಧ ತುಪ್ಪವನ್ನು ಬಳಸಿ ಲಡ್ಡು ಪ್ರಸಾದ್ ರೆಡಿ ಮಾಡ್ತಿದ್ದೇವೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಸಾಮಾನ್ಯವಾಗಿ ತಿರುಮಲ ಲಡ್ಡು ಪ್ರಸಾದಕ್ಕೆ ಶುದ್ಧ ಹಸುವಿನ ತುಪ್ಪ ಬಳಸಬೇಕು ಆದರೆ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುವ ಮೂಲಕ ವೆಂಕಟೇಶ್ವರ ಸ್ವಾಮಿಗೆ ಅವಮಾನ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ಟಿಡಿಪಿ ನೇತೃತ್ವದ ಸರ್ಕಾರ ಜನಸೇನಾ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು. ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ..!