ಮೈಸೂರು : ಅನ್ನದಾನೇಶ್ವರ ಮಠದ ಸ್ವಾಮೀಜಿಯನ್ನು ಮೈಸೂರಿನ ಸಿದ್ದಾರ್ಥ ಬಡಾವಣೆಯ ತಮ್ಮ ಕೋಣೆಯಲ್ಲಿ ಮಲಗಿದ್ದಾಗ ಮಚ್ಚಿನಿಂದ ಹತ್ಯೆ ಮಾಡಿದ ಘಟನೆ ನಡೆದಿದೆ. ಶ್ರೀ ಶಿವಕುಮಾರ ಸ್ವಾಮೀಜಿ (90) ಹತ್ಯೆಯಾದವರು.
ಟೆರೇಷಿಯನ್ ಕಾಲೇಜಿನ ಪಕ್ಕದಲ್ಲೇ ಇರುವ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ಶಿವಕುಮಾರ ಸ್ವಾಮೀಜಿ ರಾತ್ರಿ ಮಠದ ತಮ್ಮ ಕೋಣೆಯಲ್ಲಿ ಮಲಗಿದ್ದರು. ಈ ವೇಳೆ ಸ್ವಾಮೀಜಿಗೆ ಮಚ್ಚಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದ ಶಂಕೆ ಮೇಲೆ ಸೆಕ್ಯುರಿಟಿ ಗಾರ್ಡ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ನಜರ್ ಬಾದ್ ಪೊಲೀಸರ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಮಠದಲ್ಲಿ ಬಹಳ ಹಿಂದಿನ ಹಿರಿಯ ಮತ್ತು ಕಿರಿಯ ಸ್ವಾಮೀಜಿಗಳು ನಡುವೆ ಆಸ್ತಿಗಾಗಿ ಕಿತ್ತಾಟ ನಡೆಯುತ್ತಿತ್ತು ಎಂದು ತಿಳಿದು ಬಂದಿದ್ದು, ಆಸ್ತಿ ವಿಚಾರಕ್ಕೆ ಸ್ವಾಮೀಜಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ‘ಚಿಲ್ಲಿ ಚಿಕನ್’ ಸಿನಿಮಾದ ಟ್ರೇಲರ್ ರಿಲೀಸ್ – ಇದು ರೆಸ್ಟೋರೆಂಟ್ನಲ್ಲಿ ಹುಟ್ಟಿದ ಕಥೆ..!
Post Views: 151