ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.
ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ)ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸಂಸದರಾಗಿ ಆಯ್ಕೆಯಾಗಿರು ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರ, ತುಕಾರಂರಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಇದೀಗ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ.
ಇದನ್ನೂ ಓದಿ : ಅತ್ಯಾಚಾರ ಕೇಸ್- ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು..!
Post Views: 117