ಬಳ್ಳಾರಿ : ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದೆ. ವಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡ ಬಳಿಕ ಮತ್ತೋರ್ವ ಬಾಣಂತಿ ನಿನ್ನೆ ಸಾವನ್ನಪ್ಪಿದ್ದಾರೆ. ಸುಮಯಾ (25) ಮೃತ ಬಾಣಂತಿ.
ಈಕೆ ಕಳೆದ 23 ದಿನಗಳಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ (ಡಿ.5) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಪೈಕಿ ಮೃತ ಬಾಣಂತಿಯರ ಸಂಖ್ಯೆ 5ಕ್ಕೇರಿದೆ.
ಸಿಸೇರಿಯನ್ ಮಾಡಿಸಿಕೊಂಡ ಬಳಿಕ ಸುಮಯಾ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ನವೆಂಬರ್ 12ರಂದು ಸುಮಾಯ ಅವರನ್ನ ವಿಮ್ಸ್‌ಗೆ ರವಾನೆ ಮಾಡಲಾಗಿತ್ತು. ಈ ನಡುವೆ ಕಿಡ್ನಿ ವೈಫಲ್ಯವಾಗಿ ಸತತ ಡಯಾಲಿಸಿಸ್ ಮಾಡಲಾಗ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸುಮಯಾ ಸಾವನ್ನಪ್ಪಿದ್ದಾರೆ.
ಇನ್ನು ಕಳಪೆ ದ್ರಾವಣಕ್ಕೆ ಸುಮಯಾ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಪೊಷಕರು, ಸಾರ್ವಜನಿಕರಿಂದ ವೈದ್ಯರ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಬಳ್ಳಾರಿ ವಿಮ್ಸ್ನ ಸರಣಿ ಸಾವಿಗೆ ಯಾವಾಗ ಕೊನೆ? ಸಾಲು-ಸಾಲು ರಾಜಕೀಯ ನಾಯಕರು ಭೇಟಿಕೊಟ್ರು. ಖುದ್ದು ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಆದರೂ ಕೂಡ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು ನಿಂತಿಲ್ಲ.
ಇದನ್ನೂ ಓದಿ : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ನವಜಾತ ಶಿಶು ಸಾವು..!