ಬೆಂಗಳೂರು : ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನ ಅತ್ಯಾಚಾರ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕೋರ್ಟ್ ನಿನ್ನೆ ವಿಚಾರಣೆ ನಡೆಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆದರೆ ಇತ್ತ ಮುನಿರತ್ನ ಬೆಂಬಲಿಗರು ಸಂತ್ರಸ್ಥೆಯೊಬ್ಬರ ಮಗನಿಗೆ ಬೆದರಿಕೆ ಹಾಕಿದ್ದಾರೆ.
ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ, ನಿಮ್ಮ ವಂಶವೇ ಇರದಂತೆ ಮಾಡುತ್ತೇವೆ ಎಂದು ಮುನಿರತ್ನ ಬೆಂಬಲಿಗರು ಸಂತ್ರಸ್ಥೆ ಮಗನಿಗೆ ಬೆದರಿಕೆ ಹಾಕಿದ್ದಾರೆ. ಏಕಾಏಕಿ ಸಾಕ್ಷಿಯ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಹಾಗೂ ಬೆಂಬಲಿಗರು ಈ ರೀತಿ ಬೆದರಿಕೆಯೊಡ್ಡಿದ್ದಾರೆ.
ಈ ಬಗ್ಗೆ ಸಂತ್ರಸ್ಥೆಯ ಮಗ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ಆಧರಿಸಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : VHP ನಾಯಕ ಶರಣ್ ಪಂಪ್ ವೆಲ್ಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ..!