Download Our App

Follow us

Home » ರಾಜಕೀಯ » ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR..!

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR..!

ಮಂಗಳೂರು : ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಮತ್ತೊಂದು FIR ದಾಖಲಾಗಿದೆ. ಮೇ.20ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದರು.

ಜೊತೆಗೆ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದರು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೂ ತಡೆದ ಆರೋಪದ ಮೇಲೆ ಐಪಿಸಿ ಸೆಕ್ಷನ್​ 143, 147, 341, 504, 506 ಜೊತೆಗೆ 149 ಐ.ಪಿ.ಸಿಯಂತೆ ಪ್ರಕರಣ ದಾಖಲಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ದರ್ಪ ಪ್ರದರ್ಶಿಸಿದ ಆರೋಪದಡಿ FIR ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಮೇಲೆ ದಾಳಿ ನಡೆಸಿ, ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಜೊತೆಗೆ ಆರೋಪಿ ಬಿಜೆಪಿ ಮುಖಂಡ ಶಶಿರಾಜ್‌ ಶೆಟ್ಟಿ (35) ಬಂಧಿಸಿದ್ದರು.

ಶಶಿರಾಜ್‌ ಪರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಕಾಲತ್ತು ವಹಿಸಿ, ಮೇ.18ರಂದು ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಪೊಲೀಸರ ವಿರುದ್ದ ದರ್ಪ ಪ್ರದರ್ಶಿಸಿ, ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಕೆ ಹಾಕಿದ ಆರೋಪದ ಬಗ್ಗೆ ಎಫ್ಐಆರ್ ದಾಖಲಾಗಿತ್ತು. ಇದೀಗ ಶಾಸಕ ಹರೀಶ್ ಪೂಂಜಾ ವಿರುದ್ದ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : ಪತಿಯಿಂದಲೇ ಭಜರಂಗಿ ನಟಿಯ ಬರ್ಬರ ಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here