Download Our App

Follow us

Home » ಕ್ರೀಡೆ » ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 3ನೇ ಪದಕ – 50 ಮೀಟರ್​​​​​ ರೈಫಲ್​​ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸ್ವಪ್ನಿಲ್..!

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 3ನೇ ಪದಕ – 50 ಮೀಟರ್​​​​​ ರೈಫಲ್​​ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸ್ವಪ್ನಿಲ್..!

ಪ್ಯಾರಿಸ್ : ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಚೀನಾದ ಲಿಯು ಯುಕುನ್ 463.6 ಅಂಕಗಳೊಂದಿಗೆ ಚಿನ್ನದ ಪದಕ ಗೆದ್ದುಕೊಂಡರೆ, ಉಕ್ರೇನ್ ಸೆರ್ಹಿ ಕುಲಿಶ್ 461.3 ಪಾಯಿಂಟ್ಸ್​ನೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇನ್ನು 7ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದ ಸ್ವಪ್ನಿಲ್ ಕುಸಾಲೆ ಅಂತಿಮ ಸುತ್ತಿನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದರು.

ಅಲ್ಲದೆ ಜೆಕ್ ರಿಪಬ್ಲಿಕ್​ನ ಶೂಟರ್​ ಜಿರಿ ಪ್ರೀವ್ರಾಟ್ಸ್ಕಿ (440.7 ಅಂಕಗಳು) ಅವರನ್ನು ಹಿಂದಿಕ್ಕಿ ಸ್ವಪ್ನಿಲ್ ಕುಸಾಲೆ ಮೂರನೇ ಸ್ಥಾನಕ್ಕೇರಿರು. ಈ ಮೂಲಕ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಸ್ವಪ್ನಿಲ್ ಚೊಚ್ಚಲ ಒಲಿಂಪಿಕ್ಸ್ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ : ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ – 35 ಜನ ನಾಪತ್ತೆ..!

 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here