Download Our App

Follow us

Home » ಅಪರಾಧ » ನಟ ದರ್ಶನ್​​ಗೆ ಮತ್ತೊಂದು ಸಂಕಷ್ಟ – ಅರಣ್ಯ ಇಲಾಖೆಯಲ್ಲಿ ದಾಖಲಾಗಿದ್ದ ಕೇಸ್​ಗೆ ಮರುಜೀವ..!

ನಟ ದರ್ಶನ್​​ಗೆ ಮತ್ತೊಂದು ಸಂಕಷ್ಟ – ಅರಣ್ಯ ಇಲಾಖೆಯಲ್ಲಿ ದಾಖಲಾಗಿದ್ದ ಕೇಸ್​ಗೆ ಮರುಜೀವ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್​ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಮೈಸೂರು ಜಿಲ್ಲೆ ಟಿ‌.ನರಸೀಪುರದಲ್ಲಿರುವ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಪ್ರಕರಣದಲ್ಲಿ ನಟ ದರ್ಶನ್ A3, ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.

ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಾಗಿ ನೋಟಿಸ್ ಕೊಟ್ಟರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು.

ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರ‌. ಇನ್ನು ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ವಿಚಾರಣೆಗೆ ಅವಕಾಶ‌‌ ನೀಡಲಾಗಿತ್ತು. ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಅರಣ್ಯ ಇಲಾಖೆ ದರ್ಶನ್ ಅವರನ್ನ ಬಂಧಿಸಿಲ್ಲ. ಇದೀಗ ಪ್ರಕರಣ ಚುರುಕು ಗೊಳಿಸಿರುವ ಅರಣ್ಯ ಇಲಾಖೆ ಚಾರ್ಜ್ ಶೀಟ್ ಸಲ್ಲಿಕೆಗೆ ತೀರ್ಮಾನಿಸಿದ್ದು, ಮರ್ಡರ್​ ಕೇಸ್​ ನಂತರ ದರ್ಶನ್​​ಗೆ ಹೆಬ್ಬಾತು ಕೇಸ್​ ಕಂಟಕ ಶುರುವಾಗಿದೆ.

ಇದನ್ನೂ ಓದಿ : ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here