ಬೆಂಗಳೂರು : ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತಷ್ಟು ಕಾನೂನು ಕಂಟಕ ಶುರುವಾಗಿದೆ. ಪ್ರಜ್ವಲ್ ವಿರುದ್ಧ ಮತ್ತೊಂದು ರೇಪ್ ಕೇಸ್ ದಾಖಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ.
ಐಪಿಸಿ ಸೆಕ್ಷನ್ 376(2)(N), 376(2)(K), 354(A), 354(B), 354(C) 506 ಅಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ FIR ದಾಖಲಾಗಿದೆ. ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್ಐಆರ್ಗೆ ಹೊಸದಾಗಿ ಐಪಿಸಿ ಸೆಕ್ಷನ್ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ‘ಥಗ್ ಲೈಫ್’ ಸಿನಿಮಾಗೆ ಸಿಲಂಬರಸನ್ ಎಂಟ್ರಿ : ಇದು ಕಮಲ್-ಮಣಿರತ್ನಂ ಕಾಂಬಿನೇಷನ್ ಚಿತ್ರ..!