Download Our App

Follow us

Home » ರಾಜ್ಯ » SSLC ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಟಾಪ‌ರ್ – ಬೆಂಗಳೂರಿನ ಭಾವನಾ ರಾಜ್ಯಕ್ಕೆ ಪ್ರಥಮ..!

SSLC ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಟಾಪ‌ರ್ – ಬೆಂಗಳೂರಿನ ಭಾವನಾ ರಾಜ್ಯಕ್ಕೆ ಪ್ರಥಮ..!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟಸಿದ್ದು, ಪರೀಕ್ಷೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿ ಬಿಎನ್​ಆರ್​​ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಭಾವನಾ ಮೊದಲನೇ ರ‍್ಯಾಂಕ್​ ಪಡೆದುಕೊಂಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಹಿಂದೆ ಪ್ರಕಟಿಸಿದ್ದ ಫಲಿತಾಂಶದಲ್ಲಿ ಭಾವನಾ 620 ಅಂಕ ಪಡೆದಿದ್ದರು. ಆದರೆ ಮರುಮೌಲ್ಯ ಮಾಪನದ ಬಳಿಕ 625-625 ಅಂಕ‌ ಪಡೆದುಕೊಂಡಿದ್ದಾರೆ.

ಈ ಹಿಂದೆ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅಭಿನಂದನೆ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ ವಿದ್ಯಾರ್ಥಿನಿ ಫಸ್ಟ್ ರ‍್ಯಾಂಕ್‌ ಪಟ್ಟ ಅಲಂಕರಿಸಿದ್ದಾರೆ.

ಮೈಸೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಸ್ಥಾನ : ಇನ್ನು ಮರು ಮೌಲ್ಯಮಾಪನದಲ್ಲಿ ಮೈಸೂರಿನ ವಿಜಯ ವಿಠ್ಠಲ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುದೀಕ್ಷ ಎಂ.ಡಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಮೊದಲ ಫಲಿತಾಂಶದಲ್ಲಿ 620 ಅಂಕ ಪಡೆಕೊಂಡಿದ್ದರು. ಬಳಿಕ ಮರು ಮೌಲ್ಯಮಾಪನದಲ್ಲಿ 620 ರಿಂದ 624 ಅಂಕ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ್​ನಲ್ಲಿ ಟ್ರಕ್ಕಿಂಗ್​ಗೆ ತೆರಳಿದ್ದ ರಾಜ್ಯದ 9 ಮಂದಿ ಸಾ*ವು : ಇತರರ ರಕ್ಷಣೆಗೆ ಶಕ್ತಿಮೀರಿ ಪ್ರಯತ್ನ – ಸಿಎಂ ಸಿದ್ದರಾಮಯ್ಯ..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here