ಬೆಂಗಳೂರು : ನಗರದಲ್ಲಿ ಪಿಯುಸಿ ವಿದ್ಯಾರ್ಥಿನಿ ಪ್ರಬುದ್ಧ ಎಂಬ ಹೆಣ್ಣು ಮಗಳು ಬಾತ್ ರೂಂನಲ್ಲಿ ಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಟೆಕ್ಕಿಯೊಬ್ಬರ ಹೆಂಡತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಎಂಬವರ ಮೃತ ದೇಹ ಸಿಕ್ಕಿದೆ. ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗು ಇತ್ತು. ಇನ್ನು ಅಳಿಯ ಸಾಲ ಮಾಡಿ ಕಿರುಕುಳ ನೀಡುತ್ತಿದ್ದನು ಎಂದು ಸಂಧ್ಯಾ ತಂದೆ ಆರೋಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿದ ಬಸವೇಶ್ವರನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಹೆಚ್.ಡಿ ರೇವಣ್ಣಗೆ ಮತ್ತೊಂದು ಅಗ್ನಿ ಪರೀಕ್ಷೆ – ಇಂದು ಬೇಲ್ ಸಿಗದೇ ಇದ್ರೆ ಮತ್ತೆ ಅರೆಸ್ಟ್ ಆಗ್ತಾರಾ?
Post Views: 81