ಮುಂಬೈ : ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಬಳಿಕ ನಟ ಸಲ್ಮಾನ್ ಖಾನ್ಗೆ ಒಂದರ ಮೇಲೊಂದಂತೆ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ಸಲ್ಮಾನ್ ಖಾನ್ಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ.
ಮುಂಬೈ ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಮಂಗಳವಾರ ಬೆದರಿಕೆ ಸಂದೇಶ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳುಹಿಸಿದ ವ್ಯಕ್ತಿ ತಾನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಟೋಯಿ ಅವರ ಸೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಸಲ್ಮಾನ್ ಖಾನ್ ಬದುಕಬೇಕಾದರೆ, ಸಲ್ಮಾನ್ ಖಾನ್ ಜೀವಂತವಾಗಿ ಉಳಿಯಬೇಕು ಎಂದು ಬಯಸುವುದಾದರೆ ಬಿಷ್ಟೋಯಿ ಸಮುದಾಯದ ದೇಗುಲಕ್ಕೆ ಭೇಟಿ ಕೊಟ್ಟು ಕ್ಷಮೆಯಾಚಿಸಬೇಕು. ಇಲ್ಲವೇ 5 ಕೋಟಿ ರೂ. ನೀಡಬೇಕು. ಇಲ್ಲದಿದ್ದರೆ ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.
ಇನ್ನು ಬೆದರಿಕೆ ಸಂದೇಶದ ಮೂಲ ಹುಡುಕಾಡಲು ಪೊಲೀಸಲು ತನಿಖೆ ಆರಂಭಿಸಿದ್ದಾರೆ. ಅಲ್ಲದೆ ಸಲ್ಮಾನ್ ಖಾನ್ ಅವರಿಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಈ ಸಂದೇಶ ಹಿಂದೆ ಲಾರೆನ್ಸ್ ಬಿಷ್ಟೋಯಿ ಪಾತ್ರವಿದೆಯೇ ಎಂದು ಸಹ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಬೆಳಗಾವಿ : ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತಹಶೀಲ್ದಾರ್ ಕಚೇರಿಯಲ್ಲೇ FDA ಆತ್ಮಹತ್ಯೆ..!