Download Our App

Follow us

Home » ಸಿನಿಮಾ » ಮೌನಕ್ಕೆ ಜಾರಿದ ಮಾತುಗಾತಿಗೆ ಅಶ್ರುತರ್ಪಣ – ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ..!

ಮೌನಕ್ಕೆ ಜಾರಿದ ಮಾತುಗಾತಿಗೆ ಅಶ್ರುತರ್ಪಣ – ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ..!

ಬೆಂಗಳೂರು : ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣಾ ನಿನ್ನೆ ಚಿರನಿದ್ರೆಗೆ ಜಾರಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇದೀಗ ಅಪರ್ಣಾ ಪತಿ ನಾಗರಾಜ್​ ವಸ್ತಾರೆ ಭಾವುಕ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್​ ಮಾಡಿದ ಅಪರ್ಣಾ ಪತಿ ನಾಗರಾಜ್​ ವಸ್ತಾರೆ ಅವರು, ನಮಸ್ಕಾರ. ʻʻನನ್ನ ವೈಯಕ್ತಿಕ ಬದುಕಿನ ಈ ದುರ್ದೈವದ ಹೊತ್ತಿನಲ್ಲಿ ಅಪರ್ಣೆಯನ್ನು ಸ್ಮರಿಸಿರುವ ಎಲ್ಲರಿಗೂ ಋಣಿ.

ಅವಳನ್ನು ಕೊನೆಯ ಸಲ ನೋಡಬಯಸುವವರು ಬನಶಂಕರಿ ಎರಡನೇ ಹಂತದ ಸುಚಿತ್ರಾ ಫಿಲ್ಮ್ ಸೊಸೈಟಿಯ ಬಳಿಯಿರುವ ಅವಳಿದ್ದ ಮನೆಗೆ ಬರಬಹುದು. ಮಧ್ಯಾಹ್ನ 12 ಗಂಟೆಯವರೆಗೆ ದರ್ಶನ ಅವಕಾಶವಿದೆ.

ದಯಮಾಡಿ ಬರಿಗೈಯಲ್ಲಿ ಬಂದರೆ ಹೆಚ್ಚು ಚೆನ್ನು. ಎರಡು ಮೂರು ತಾಸಿರುವ ಹೂವು-ಹಾರ ಬಾಡಿದಲ್ಲಿ ಇಷ್ಟು ಕಾಲ ಅವಳು ಕಾಪಿಟ್ಟ ನನ್ನ ಮನೆಮನಸ್ಸುಗಳ ಸುತ್ತಲಿನ ಕಸ ಹೆಚ್ಚೀತು. ಊರಿನ ಅಂದಗೆಟ್ಟೀತು. ಪ್ಲಾಸ್ಟಿಕ್ ಪಾಲಿಥೀನುಗಳಂತೂ ಸುತಾರಾಂ ಬೇಡ. ಈ ನಿಟ್ಟಿನಲ್ಲಿ ಕಳಕಳಿಯ ಕೋರಿಕೆʼʼ ಎಂದು ನಾಗರಾಜ್‌ ವಸ್ತಾರೆ ಭಾವುಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ :ನಾಗೇಂದ್ರ ಅರೆಸ್ಟ್ ಬೆನ್ನಲ್ಲೇ ಶಾಸಕ ದದ್ದಲ್​​ಗೂ ಢವಢವ – ಯಾವುದೇ ಕ್ಷಣ EDಯಿಂದ ಬಂಧನ ಸಾಧ್ಯತೆ..! 

Leave a Comment

DG Ad

RELATED LATEST NEWS

Top Headlines

ತೆರೆಮೇಲೆ ಅಬ್ಬರಿಸಿದ “ಬಘೀರ” – ಸೂಪರ್ ಹೀರೋ ಆದ ರೋರಿಂಗ್ ಸ್ಟಾರ್ ಶ್ರೀಮುರಳಿ..!

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಘೀರ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ಮೂಡಿಬಂದ ಈ ಚಿತ್ರಕ್ಕೆ ಡಾ. ಸೂರಿ ನಿರ್ದೇಶನ ಮಾಡಿದ್ದಾರೆ.

Live Cricket

Add Your Heading Text Here