ಬೆಂಗಳೂರೂ : ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಜು.11ರಂದು ಬನಶಂಕರಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಯಶಸ್ವಿ ನಿರೂಪಕಿಯಾಗಿ 3 ದಶಕಗಳ ವರೆಗೆ ಕನ್ನಡ ಸೇವೆ ಸಲ್ಲಿಸಿದ ಅಪರ್ಣಾ, 2014 ರಲ್ಲಿ ಬೆಂಗಳೂರಿನ “ನಮ್ಮ ಮೆಟ್ರೋ”ದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ, ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು.
ಅಪರ್ಣಾ ನೀಡಿದ ಈ ಧ್ವನಿ ಮೆಟ್ರೋ ಪ್ರಯಾಣಿಕರ ಕಿವಿ ಹಾಗೂ ಮನಸ್ಸಿಗೆ ತಟ್ಟಿತ್ತು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅಪರ್ಣಾ ಅವರು ಧ್ವನಿ ನೀಡಿದ್ದರು. ಇಂದಿಗೂ ಮೆಟ್ರೋ ನಿಲ್ದಾಣ ಮತ್ತು ರೈಲುಗಳಲ್ಲಿ ಸೂಚನೆಗಳು ಅಪರ್ಣಾ ಅವರು ಧ್ವನಿಯಲ್ಲಿ ನಾವು ಕೇಳುತ್ತವೆ. “ರೈಲು ಈಗ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜಸ್ಟಿಕ್ಗೆ ತಲುಪಲಿದೆ, ಬಾಗಿಲುಗಳು ಎಡಕ್ಕೆ ತೆರೆಯಲಿವೆ” ಎಂಬ ಧ್ವನಿ ಅಪರ್ಣಾ ಅವರದ್ದು. ಇದೀಗ ಅಪರ್ಣಾರ ಧ್ವನಿ ಇದ್ದು, ಶರೀರ ಇಹಲೋಕ ತ್ಯಜಿಸಿದೆ. ನಿರೂಪಕಿ ಅಪರ್ಣಾ ಅವರಿಗೆ ಬಿಎಂಆರ್ಸಿಎಲ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ನಮ್ಮ ಮೆಟ್ರೋದಲ್ಲಿ ವಾಯ್ಸ್ ಅನೌನ್ಸ್ ಮಾಡವ ಮೂಲಕ ಗೌರವದ ಸಂತಾಪ ಸೂಚಿಸಿದ್ದಾರೆ. ಮೊದಲ ಬಾರಿಗೆ 2011ರ ಅಕ್ಟೋಬರ್ 20 ರಂದು ಎಂಜಿ ರೋಡ್ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಆರಂಭಿಸಿದಾಗಿನಿಂದ ಇತ್ತೀಚೆಗೆ 2023ರ ಅಕ್ಟೋಬರ್ 9 ರಂದು ಉದ್ಘಾಟನೆಗೊಂಡ ಕೆಂಗೇರಿಯಿಂದ ಚಲ್ಲಘಟ್ಟ, ಕೆ.ಆರ್ ಪುರನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ನಟಿ ಅಪರ್ಣಾ ಧ್ವನಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ಅಧಿಕಾರಿಗಳು ಇಂದು ಅಪರ್ಣಾ ಅವರ ಮನೆಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಂತೆಯೇ ಎಲ್ಲ ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ಅಪರ್ಣಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸ್ಥಳೀಯ ಅಧಿಕಾರಿಗಳಿಗೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಸೂಚಿಸಿದ್ದಾರೆ.
ಇದನ್ನೂ ಓದಿ : ಮೌನಕ್ಕೆ ಜಾರಿದ ಮಾತುಗಾತಿಗೆ ಅಶ್ರುತರ್ಪಣ – ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ..!