ಬೆಂಗಳೂರು : ಸಹಕಾರ ಸಚಿವ ಕೆಎನ್ ರಾಜಣ್ಣಗೆ ಭಾರಿ ಸಂಕಷ್ಟ ಎದುರಾಗಿದೆ. ಅಪೆಕ್ಸ್ ಬ್ಯಾಂಕ್ ಎಂಡಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸಚಿವ ಕೆಎನ್ ರಾಜಣ್ಣನ ವಿರುದ್ಧ ದೂರು ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ರಾಜ್ಯಪಾಲರು ದಿನೇಶ್ ಕಲ್ಲಹಳ್ಳಿ ನೀಡಿರುವ ಪತ್ರವನ್ನು ಗಮನಿಸಿ ಮುಖ್ಯ ಕಾರ್ಯದರ್ಶಿಗೆ ರವಾನಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
30 ದಿನದೊಳಗೆ ಮುಖ್ಯ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳದಿದ್ದರೆ ಸಚಿವ ರಾಜಣ್ಣ ವಿರುದ್ಧ ಹೈಕೋರ್ಟ್ ನಲ್ಲಿ ದೂರು ದಾಖಲಿಸಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ನಿರ್ಧರಿಸಿದ್ದಾರೆ.
ದಿನೇಶ್ ಕಲ್ಲಹಳ್ಳಿ ಅವರು ಅಪೆಕ್ಸ್ ಬ್ಯಾಂಕ್ ಎಂಡಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 600 ಪುಟಗಳ ದಾಖಲೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್.. ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!