ಪುಣೆ : ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದು 25 – 30 ಪ್ರವಾಸಿಗರು ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.
ತಲೆಗಾಂವ್ ಪ್ರದೇಶದ ಕುಂಡ್ಮಾಲ್ ಬಳಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಹಳೆಯ ಸೇತುವೆ ಕೊಚ್ಚಿ ಹೋಗಿದೆ. ಮಳೆಯ ಆರ್ಭಟ ಜೋರಾದ ಹಿನ್ನೆಲೆ ಪ್ರವಾಹ ಉಂಟಾಗಿ ದುರ್ಘಟನೆ ಸಂಭವಿಸಿದೆ. ಈ ಸೇತುವೆ ಏಕಾಏಕಿ ಕುಸಿದ ಪರಿಣಾಮ ಸೇತುವೆ ಮೇಲಿದ್ದ 25 ರಿಂದ 30 ಜನ ನದಿಗೆ ಬಿದ್ದಿದ್ದಾರೆ. ಕೆಲ ಪ್ರವಾಸಿಗರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆಲವರನ್ನು ರಕ್ಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಕೆಲವು ತಿಂಗಳಿನಿಂದ ಈ ಸೇತುವೆ ಶಿಥಿಲಾವಸ್ಥೆಯಲ್ಲಿತ್ತು. ಹಾಗಾಗಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದ್ರೆ ಇತ್ತೀಚೆಗೆ ಭಾರೀ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಇಂದು ಇದ್ದಕ್ಕಿದ್ದಂತೆ ಪ್ರವಾಹ ಉಂಟಾಗಿದ್ದು, ಸೇತುವೆ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ನದಿ ವೀಕ್ಷಣೆ ಮಾಡುತ್ತಿದ್ದ 20-25 ಮಂದಿ ನದಿಯಲ್ಲೇ ಕೊಚ್ಚಿ ಹೋಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ : ಸತೀಶ್ ನೀನಾಸಂ ನಟನೆಯ ‘ದಿ ರೈಸ್ ಆಫ್ ಅಶೋಕ’ ಶೂಟಿಂಗ್ ಕಂಪ್ಲೀಟ್ – ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ!
