ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಿಗೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ 5 ತಾಲೂಕು, ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಇಂದು (ಜೂ.16 ಸೋಮವಾರ) ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ” ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಜೂ.16ರಂದು ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡದಲ್ಲಿಯೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆ ಹೆಚ್ಚಿರುವ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಉಲ್ಲಾಳ, ಮುಲ್ಕಿ ಸೇರಿ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.
ಇದನ್ನೂ ಓದಿ : ಪವನ ವಿದ್ಯುತ್ ಕ್ಷೇತ್ರಕ್ಕೆ 1331.48 ಮೆಗಾವ್ಯಾಟ್ ಸೇರ್ಪಡೆ.. ಕರ್ನಾಟಕ ಈಗ ದೇಶದಲ್ಲೇ ನಂಬರ್ 1
