ಅಹಮದಾಬಾದ್ : ಮೇಘನಿ ನಗರದ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ಇವುಗಳಲ್ಲಿ ವಿಮಾನದ ‘ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಆ ಬಳಿಕ ನಿನ್ನೆ ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಪತ್ತೆಯಾಗಿದೆ.
ಈ 2ನೇ ಬ್ಲ್ಯಾಕ್ ಬಾಕ್ಟ್ ಪ್ರಕರಣದ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎಂಬುದನ್ನ ಅರ್ಥಮಾಡಿಕೊಳ್ಳಲು ಸಹಾಯಕವಾಗಲಿದೆ. ಇದು ಕಾಕ್‌ಪಿಟ್ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ತಿಳಿದುಬಂದಿದೆ.
ಮೇ ಡೇ – ಪೈಲಟ್‌ನ ಕೊನೇ ಸಂದೇಶ : ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ನೋ ಪವರ್.. ಗೋಯಿಂಗ್ ಡೌನ್.. ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.
ಇದನ್ನೂ ಓದಿ : ಬೆಂಗಳೂರಿಗರೇ ಎಚ್ಚರ.. ಇಂದಿನಿಂದ ನಗರದಾದ್ಯಂತ ರ‍್ಯಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿಗಳು ಬ್ಯಾನ್!







