ತುಮಕೂರಿಗೆ ತನ್ನದೇ ಆದ ಪರಂಪರೆ ಇದೆ – ಮರುನಾಮಕರಣಕ್ಕೆ ಸಿದ್ಧಗಂಗಾ ಶ್ರೀಗಳ ತೀವ್ರ ವಿರೋಧ!

ತಮಕೂರು : ಇತ್ತೀಚೆಗೆ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಅಂತ ಮರುನಾಮಕರಣ ಮಾಡಲಾಯಿತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಮರುನಾಮಕರ ಮಾಡಿದ್ದಾರೆ. ಈ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಅವರು ತಮಕೂರಿಗೆ ‘ಬೆಂಗಳೂರು ಉತ್ತರ’ ಎಂದು ಮರುನಾಮಕರಣ ಮಾಡಲು ಮುಂದಾಗಿದ್ದಾರೆ. ಆದರೆ, ತುಮಕೂರಿಗೆ ಬೆಂಗಳೂರು ಉತ್ತರ ಮರುನಾಮಕರಣಕ್ಕೆ ಇದೀಗ ಭಾರೀ ವಿರೋಧ ವ್ಯಕ್ತವಾಗಿದೆ.

ತುಮಕೂರು ಜಿಲ್ಲೆಯ ಹೆಸರು ಬದಲಾವಣೆ ವಿಚಾರದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಪರಂಪರೆ ಮತ್ತು ಅಸ್ತಿತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತುಮಕೂರು ಹೆಸರನ್ನು ಉಳಿಸಿಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ಅಭಿವೃದ್ಧಿ ದೃಷ್ಟಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡಿದ್ದಾರೆ. ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವ ವಿಷಯದ ಬಗ್ಗೆ ಯಾವ ದೃಷ್ಟಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೋ ಗೊತ್ತಿಲ್ಲ. ಆದರೆ ತುಮಕೂರು ಹೆಸರು ಉಳಿಸಿಕೊಳ್ಳುವುದು ಮುಖ್ಯ.  ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವ ಪ್ರಸ್ತಾಪ ಹೇಳಿಕೆ ರೂಪದಲ್ಲಿದೆ. ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ಕಾದು ನೋಡಬೇಕು. ಬದಲಾವಣೆ ಆದರೆ ಏನು ಉಪಯೋಗ ಆಗದಿದ್ದರೆ ಏನು ಅಂತ ಅದರ ಸಾಧಕ ಬಾಧಕಗಳ ಬಗ್ಗೆ ಚಿಂತನೆ ಮಾಡಿದರೆ, ಆನಂತರ ಹೇಳಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ದುರಂತ – 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ!

Btv Kannada
Author: Btv Kannada

Read More