KUWSDB ಅಧ್ಯಕ್ಷ ಸ್ಥಾನದಿಂದ ವಿನಯ್ ಕುಲಕರ್ಣಿ ವಜಾಗೆ ಬಿಜೆಪಿ ಮುಖಂಡ N.R ರಮೇಶ್ ಆಗ್ರಹ!

ಬೆಂಗಳೂರು : ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ನೀಡಿರುವ KUWS&DB (ಕರ್ನಾಟಕಾ ಅರ್ಬನ್ ವಾಟರ್ ಸಪ್ಲೈ & ಡ್ರೈನೇಜ್ ಬೋರ್ಡ್) ಅಧ್ಯಕ್ಷ ಸ್ಥಾನದಿಂದ ಕೂಡಲೇ ಅವರನ್ನು ತೆಗೆದು ಹಾಕಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಗ್ರಹ ಮಾಡಿದ್ದಾರೆ.

ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ಮತ್ತೆ ವಶಕ್ಕೆ ಪಡೆಯಲಾಗಿದೆ. ಪ್ರಸ್ತುತ ವಿನಯ್ ಕುಲಕರ್ಣಿ “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ” ಅಧ್ಯಕ್ಷರ ಮತ್ತು ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದುಗೊಳಿಸಿ, ಜೂ.12 ರಂದು ಅವರನ್ನು CBI ವಶಕ್ಕೆ ನೀಡಲಾಗಿದೆ.

ಹೀಗಾಗಿ, ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸರ್ಕಾರದ ನೀಡಿದ್ದ “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ” (KUWS & DB)ಯ ಅಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ. ಅಲ್ಲದೇ, “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ” ಯಲ್ಲಿ ಬೃಹತ್ ಭ್ರಷ್ಟಾಚಾರ ನಡೆಯುತ್ತಿದ್ದು, ಈಗಾಗಲೇ ಕೇಂದ್ರ ಸರ್ಕಾರದ “AMRUT ಯೋಜನೆ ಅಡಿಯಲ್ಲಿ 2023-24 ಮತ್ತು 2024-25 ರ ಅವಧಿಯಲ್ಲಿ ಬಿಡುಗಡೆಯಾದ 17,000 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಹಗರಣವನ್ನು ಜಾರಿ ನಿದೇಶನಾಲಯ ತನಿಖೆ ನಡೆಸುತ್ತದೆ.

ಆದ್ದರಿಂದ ವಿನಯ್ ಕುಲಕರ್ಣಿ ಅವರನ್ನು ಆ ಸ್ಥಾನದಿಂದ ವಜಾಗೊಳಿಸಿ, ಮಂಡಳಿಯಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ತನಿಖೆ ನಡೆಸಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ!

Btv Kannada
Author: Btv Kannada

Read More