ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ – ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ.

ಭಾಗಮಂಡಲ-ನಾಪೋಕ್ಲು ಮಾರ್ಗದ ರಸ್ತೆ ಕೂಡ ಜಲಾವೃತಗೊಂಡಿದೆ. ನೂತನ ಫ್ಲೈಓವರ್ ಇರುವುದರಿಂದ ವಾಹನ ಸಂಚಾರ ನಿರಾತಂಕವಾಗಿ ಸಾಗಿದ್ದು, ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿ ತೊರೆಗಳು ತುಂಬಿ ಹರಿಯುತ್ತಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬ್ರಹ್ಮಗಿರಿ ತಪ್ಪಲು ಪ್ರದೇಶ ತಲಕಾವೇರಿಯಲ್ಲೂ ಭಾರೀ ಮಳೆಯಾಗುತ್ತಿದೆ.

ಇದೇ ರೀತಿ ಮಳೆ ಮುಂದುವರಿದಲ್ಲಿ ಮಡಿಕೇರಿ-ಭಾಗಮಂಡಲ, ನಾಪೋಕ್ಲು-ಭಾಗಮಂಡಲ ರಸ್ತೆಗಳ ಮೇಲು ನೀರು ತುಂಬಿ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಸಮೀಪಕ್ಕೂ ನೀರು ಬರುವ ಸಾಧ್ಯತೆ ಇದೆ.

ಇದನ್ನೂ ಓದಿ : ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲೇ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ!

Btv Kannada
Author: Btv Kannada

Read More