ಬೆಂಗಳೂರು : ಲೋಕಾಯುಕ್ತ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಂದ ಕೋಟಿ ಕೋಟಿ ಹಣ ವಸೂಲಿ ಮಾಡಿರುವ ಪ್ರಕರಣದಲ್ಲಿ ನಿವೃತ್ತ ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ಅರೆಸ್ಟ್ ಆಗಿದ್ದ. ಇದೀಗ ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಬಂಧನಕ್ಕೊಳಗಾಗಿರುವ ಆರೋಪಿ ನಿಂಗಪ್ಪ ಪ್ರಕರಣಕ್ಕೆ ತಡೆ ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದ. ಹಾಗಾಗಿ ಈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ತಡೆಯಾಜ್ಞೆ ತೆರವಿಗೆ ಲೋಕಾಯುಕ್ತ ಎಸ್ಪಿಪಿ ಮನವಿ ಮಾಡಿದ್ದಾರೆ. ಈ ಸಂಬಂಧ ಸೂಕ್ತ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.
ಪ್ರಕರಣದಲ್ಲಿ ಲೋಕಾಯುಕ್ತ ಎಸ್ಪಿ 1 ಶ್ರೀನಾಥ್ ಜೋಶಿ ವಿರುದ್ದ ಆರೋಪ ಇತ್ತು. ಹಾಗಾಗಿ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಸದ್ಯ ಹೈಕೋರ್ಟ್ ಈ ಪ್ರಕರಣಕ್ಕೆ ತಡೆ ನೀಡಿದೆ.
ಇದನ್ನೂ ಓದಿ : ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ ‘ಉಸಿರು’ ಚಿತ್ರದ ಟೀಸರ್ ರಿಲೀಸ್!

Author: Btv Kannada
Post Views: 239