ಶಾಲೆಯ 2ನೇ ಮಹಡಿಯಿಂದ ತಲೆ ತಿರುಗಿ ಬಿದ್ದ 10ನೇ ತರಗತಿ ವಿದ್ಯಾರ್ಥಿನಿ – ಆಸ್ಪತ್ರೆಗೆ ದಾಖಲು!

ಬೆಂಗಳೂರು : ವಿದ್ಯಾರ್ಥಿನಿಯೊಬ್ಬಳು ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದಿರುವ ಘಟನೆ ನಗರದ ಮಲ್ಲೇಶ್ವರಂ 13ನೇ ಕ್ರಾಸ್‌ನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕೃತಿಕಾ (12) ಎರಡನೇ ಮಹಡಿಯಿಂದ ಕೆಳಗಡೆ ಬಿದ್ದ ವಿದ್ಯಾರ್ಥಿನಿ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಕೃತಿಕಾ ಪಾರಾಗಿದ್ದಾಳೆ.

ಇಂದು ಮಧ್ಯಾಹ್ನ 1ಗಂಟೆಯ ಸುಮಾರಿಗೆ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕೃತಿಕಾ ತಲೆ ತಿರುಗಿ ಕೆಳಗಡೆ ಬೀಳುತ್ತಿದ್ದಂತೆ ಅಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಕ್ಷಣೆ ಮಾಡಿದ್ದಾರೆ. ಆಕೆಯ ಕೈ ಮತ್ತು ಕಾಲುಗಳಿಗೆ ಸಣ್ಣ ಪುಟ್ಟ‌ಗಾಯಗಳಾಗಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿದ್ಯಾರ್ಥಿನಿ ಕೃತಿಕಾ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬಿಗ್​ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ-ಕಿಶನ್ ನಟನೆಯ “ಪೆನ್ ಡ್ರೈವ್” ಚಿತ್ರ ಜು.4ಕ್ಕೆ ತೆರೆಗೆ!

Btv Kannada
Author: Btv Kannada

Read More