ಮಂಗಳೂರು ಪೊಲೀಸ್‌ ಇಲಾಖೆಗೆ ಭರ್ಜರಿ ಸರ್ಜರಿ – ಬಜ್ಪೆ ಠಾಣೆ ಹೆಡ್​​ ಕಾನ್ಸ್‌ಟೇಬಲ್ ರಶೀದ್ ಸೇರಿ 56 ಸಿಬ್ಬಂದಿ ವರ್ಗಾವಣೆ!

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದ ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.

Transfer order 2025

ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಗೃಹ ಇಲಾಖೆ, ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದೆ. 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಹೆಡ್ ಕಾನ್ಸ್‌ಟೇಬಲ್ ರಶೀದ್
ಹೆಡ್ ಕಾನ್ಸ್‌ಟೇಬಲ್ ರಶೀದ್

ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಹೆಡ್ ಕಾನ್ಸ್‌ಟೇಬಲ್ ರಶೀದ್ ಸುಹಾಸ್ ಹಂತಕರ ಜತೆ ಕೈಜೋಡಿಸಿದ್ದರು ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು.

Transfer order 2025

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೋಮಹಿಂಸಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಬದಲಾವಣೆ ಮಾಡಬೇಕು ಎಂಬ ಅಗ್ರಹ ವ್ಯಕ್ತವಾಗಿತ್ತು.

Transfer order 2025

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದರು. ಅದಾದ ನಂತರ ಕರಾವಳಿಯಲ್ಲಿ ಕೋಮು ಹಿಂಸಾಚಾರ ತಡೆಯುವುದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸುವ ಘೋಷಣೆ ಮಾಡಿದ್ದರು. ಅದರಂತೆ ಇದೀಗ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಜಾರಿಗೆ ಬಂದಿದೆ. ಆ ನಂತರ ಇದೀಗ ಪೊಲೀಸ್ ಇಲಾಖೆಯ ತಳಮಟ್ಟದ ಸಿಬ್ಬಂದಿ ವರ್ಗಾವಣೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಮತ್ತೆ ಒಂದಾದ ಶಿವಣ್ಣ, ಡಾಲಿ ಧನಂಜಯ್​ – ಸದ್ದಿಲ್ಲದೇ ಅನೌನ್ಸ್ ಆಯ್ತು ಹೇಮಂತ್‌‌ ರಾವ್​​ ಹೊಸ ಸಿನಿಮಾ!

Btv Kannada
Author: Btv Kannada

Read More