ಐಪಿಎಸ್ ದಯಾನಂದ್​​ನ ಅರೆಸ್ಟ್ ಮಾಡಿ – ಟಿ.ಜೆ ಅಬ್ರಹಾಂ ದೂರು!

ಬೆಂಗಳೂರು : ಆರ್​ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವಿರುದ್ದ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಡಿಸಿಎಂ ಡಿಕೆ ಶಿವಕುಮಾರ್, ದುರಂತದ ವೇಳೆ ಕಮಿಷನರ್ ಆಗಿದ್ದ ಬಿ.ದಯನಂದ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್, ಸಸ್ಪೆಂಡ್ ಆದ ಪೊಲೀಸ್ ಅಧಿಕಾರಿ ದಯಾನಂದ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, DPAR ಕಾರ್ಯದರ್ಶಿ ಸತ್ಯವತಿ, ಕೆಎಸ್ಸಿಎ, ಆರ್​ಸಿಬಿ, ವಿಕಾಸ್ ಕುಮಾರ್, ಶೇಖರ್ ತೆಕ್ಕಣನವರ್, ವಿಧಾನಸೌಧ ಡಿಸಿಪಿ ಕರಿಬಸನಗೌಡ ಸೇರಿ ಹಲವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ದೂರು ನೀಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ!

Btv Kannada
Author: Btv Kannada

Read More