ಬೆಂಗಳೂರು : ಮಂಡ್ಯ ಜಿಲ್ಲೆ ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ನೂತನ ವಿಶ್ವ ವಿದ್ಯಾಲಯದ ಕ್ಯಾಂಪಸ್ ಆರಂಭಿಸುತ್ತಿದೆ. ನೆಲಮಂಗಲದ ಬಳಿ ಇರುವ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಆದಿಚುಚನಗಿರಿ ವಿಶ್ವವಿದ್ಯಾಲಯ ಹಾಗೂ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಇಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಉದ್ಘಾಟಿಸಲಿದ್ದಾರೆ.
ಹಾಗಾಗಿ ಬಿಜಿಎಸ್ ಕಾಲೇಜು ಮುಂಭಾಗ ಮೂರು ಹಂತದಲ್ಲಿ ಭಾರೀ ಭಧ್ರತೆ ಕೈಗೊಳ್ಳಲಾಗಿದೆ. ಪ್ರತಿ ಗೇಟ್ನಲ್ಲಿ ಪ್ರತಿಯೊಬ್ಬರನ್ನೂ ತಪಾಸಣೆ ಬಳಿಕ ಒಳಗಡೆ ಬಿಡಲಾಗುತ್ತಿದೆ. ಮುಖ್ಯ ಗೇಟ್ ಭಾಗದಲ್ಲಿ ಅಡಿಷನಲ್ ಎಸ್ಪಿ ನೇತೃತ್ವದಲ್ಲಿ ಭದ್ರತೆಯನ್ನು ಒದಗಿಸಲಾಗಿದೆ.
ಬಾಂಬ್ ಸ್ಕ್ವಾಡ್ ಸೇರಿದಂತೆ ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸಲಾಗುತ್ತಿದ್ದು, ಮಹಿಳೆಯರು ಮತ್ತು ಪುರುಷರ ಪ್ರತ್ಯೇಕ ತಪಾಸಣೆ ಮಾಲಾಗುತ್ತಿದೆ. ಕಾರ್ಯಕ್ರಮ ವೇದಿಕೆ ಮುಂಭಾಗ ಕೂಡ ಮೆಟಲ್ ಡಿಟೆಕ್ಟರ್ ಮೂಲಕ ಪರಿಶೀಲನೆ ಮಾಡಲಾಗಿದೆ.
ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸಚಿವರಾದ ಕುಮಾರಸ್ವಾಮಿ, ವಿ.ಸೋಮಣ್ಣ, ರಾಜ್ಯದ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಆದಿಚುಂಚನಗಿರಿ ಮಠದ ಕಾರ್ಯಕ್ರಮ ಬಳಿಕ ಅಮಿತ್ ಶಾ ಅವರು ಬಿಜೆಪಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಬಿಜೆಪಿ ಅಧ್ಯಕ್ಷರ ಬಗ್ಗೆ ಅಮಿತ್ ಶಾ ಅಭಿಪ್ರಾಯ ಸಂಗ್ರಹ ಮಾಡಲಿದ್ದು, ರಾಜ್ಯಾಧ್ಯಕ್ಷರ ಬಗ್ಗೆ ರಾಜ್ಯ ಬಿಜೆಪಿ ಮುಖಂಡರು, ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಬಿ.ವೈ ವಿಜಯೇಂದ್ರ ಅವರನ್ನು ಮುಂದುವರಿಸಬೇಕೋ, ಬೇಡ್ವೋ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ : ‘ಲೋಕಾ’ ಹೆಸರಲ್ಲಿ ನೂರಾರು ಕೋಟಿ ವಸೂಲಿ – ED ತನಿಖೆ ಉರುಳು.. ಮಂತ್ರಿ, ಬಿಡಿಎ, ಅಬಕಾರಿ ಅಧಿಕಾರಿಗಳು ಜೈಲು ಸೇರುವ ಸಾಧ್ಯತೆ!
