ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿ – ರಾಜ್ಯ ಬಿಜೆಪಿಗೆ ಅಮಿತ್ ಶಾ ಸೂಚನೆ!

ಬೆಂಗಳೂರು : ‘ಭ್ರಷ್ಟ’ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವಂತೆ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರು ರಾಜ್ಯ ಬಿಜೆಪಿಗೆ ಸಲಹೆ ಮತ್ತು ಸೂಚನೆ ನೀಡಿದ್ದಾರೆ.

‘ಪಕ್ಷದ ಎಲ್ಲ ನಾಯಕರೂ ಒಗ್ಗಟ್ಟಾಗಿ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಹೋರಾಟ ನಡೆಸಬೇಕು. ಹಳ್ಳಿ- ಹಳ್ಳಿವರೆಗೂ ಸರ್ಕಾರದ ಬಂಡವಾಳ ಬಯಲು ಮಾಡಬೇಕು’ ಎಂದು ಅಮಿತ್ ಶಾ ರಾಜ್ಯ ಬಿಜೆಪಿಗೆ ಸಲಹೆ ನೀಡಿದ್ದಾರೆ. ಜೆಡಿಎಸ್‌ ಜತೆ ಹೊಂದಿಕೊಂಡು ಹೋಗಬೇಕು. ಹೋರಾಟಗಳಲ್ಲೂ ಅವರನ್ನು ತೊಡಗಿಸಿಕೊಳ್ಳಬೇಕು. ಆ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎರಡೂ ಪಕ್ಷಗಳು ಒಂದಾಗಿ ಮುನ್ನಡೆದರೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಸಾಬೀತಾಗಿದೆ ಎಂದು ಅಮಿತ್ ಶಾ ರಾಜ್ಯ ನಾಯಕರಿಗೆ ತಿಳಿಸಿದ್ದಾರೆ’ ಮೂಲಗಳು ಹೇಳಿವೆ.

ಆದಿಚುಂಚನಗಿರಿ ವಿಶ್ವವಿದ್ಯಾಲಯ(ಎಸಿಯು) ಬೆಂಗಳೂರು ಕ್ಯಾಂಪಸ್, ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಉದ್ಘಾಟಿಸಲು ಅಮಿತ್ ಶಾ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನಾನು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಅವರೊಂದಿಗೆ ಅಮಿತ್ ಶಾ ಜಿ ಅವರನ್ನು ಭೇಟಿ ಮಾಡಿದೆವು. ಕರ್ನಾಟಕದ ರಾಜಕೀಯ ಸನ್ನಿವೇಶ ಮತ್ತು ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದೇವೆ.

ರಾಜ್ಯ ಸರ್ಕಾರವು ಅಲ್ಪಸಂಖ್ಯಾತರನ್ನು ಓಲೈಸಲು ಮಾತ್ರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಾಯಸ್’ ಎಂಬ ದೃಷ್ಟಿಕೋನದೊಂದಿಗೆ ಎಲ್ಲಾ ಸಮುದಾಯಗಳಿಗೆ, ಹಿಂದೂಗಳು ಮತ್ತು ಅಲ್ಪಸಂಖ್ಯಾತರಿಗೆ ನ್ಯಾಯವನ್ನು ಖಚಿತಪಡಿಸುತ್ತಿದ್ದಾರೆ ಎಂದು ಹೇಳಿದರು.

ವಸತಿ ಇಲಾಖೆಯಡಿಯಲ್ಲಿ, ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿಭಜಕ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿ ಇದರ ವಿರುದ್ಧ ಹೋರಾಡಲಿದೆ. ಮುಖ್ಯಮಂತ್ರಿಗಳ ನಡವಳಿಕೆ ಅವರ ಸ್ಥಾನದ ಘನತೆಗೆ ಕುಂದು ತರುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು.

ಇದನ್ನೂ ಓದಿ : ಸಕಲೇಶಪುರದಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Btv Kannada
Author: Btv Kannada

Read More