ಹುಬ್ಬಳ್ಳಿ : ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ASI ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಪ್ಪ ಕುಂಬಾರ್ ಅವರು ಕರ್ತವ್ಯ ನಿರ್ವಹಿಸಿ ಧಾರವಾಡದಲ್ಲಿನ ಮನೆ ಕಡೆ ಹೋಗುತ್ತಿದ್ದಾಗ, ಮೈಕ್ರೋಪಿನೀಶ್ ಪ್ಯಾಕ್ಟರಿ ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂದಿಸಿದ ಹಾಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಹಿಟ್ ಆಂಡ್ ಪ್ರಕರಣ ದಾಖಲು ಮಾಡಿಕೊಂಡು ಅಪಘಾತ ಮಾಡಿ ಪರಾರಿಯಾಗಿರುವ ವಾಹನದ ಪತ್ತೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ : ಬೈಕ್ ಟ್ಯಾಕ್ಸಿ ನಿಷೇಧ ಬೆನ್ನಲ್ಲೇ ದುಪ್ಪಟ್ಟು ದರ ವಸೂಲಿಗಿಳಿದ ಆಟೋ ಚಾಲಕರು!
