ರಾಯಚೂರಿಗೆ ಇಂದು ಸಿಎಂ ಸಿದ್ದರಾಮಯ್ಯ ಆಗಮನ – ಭರ್ಜರಿ ಸಮಾರಂಭಕ್ಕೆ ಸಕಲ ಸಿದ್ಧತೆ!

ರಾಯಚೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂನ್ 23) ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ಈ ಸಂದರ್ಭಕ್ಕಾಗಿ ರಾಯಚೂರಿನ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ವಿಶೇಷ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೊದಲಿಗೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆ. ಬಳಿಕ ಬುಡಕಟ್ಟು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ, 371(ಜೆ) ದಶಮಾನೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿರುವ ಹಿನ್ನೆಲೆ ಸಮಾರಂಭಕ್ಕೆ ಅದ್ದೂರಿ ಸಿದ್ಧತೆ ನಡೆಸಲಾಗಿದೆ.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 936 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಹಲವು ಕಾಮಗಾರಿಗಳ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಲಿದ್ದಾರೆ. ಸಿದ್ಧರಾಮಯ್ಯ ಆಗಮನಕ್ಕಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ‌ ಸಿದ್ಧತೆ ಮಾಡಲಾಗಿದ್ದು, ಎಲ್ಲಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಇದನ್ನೂ ಓದಿ : ಬುಡಕಟ್ಟು ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ – ನಟ ವಿಜಯ್ ದೇವರಕೊಂಡ ವಿರುದ್ಧ FIR.. ಬಂಧನ ಸಾಧ್ಯತೆ!

Btv Kannada
Author: Btv Kannada

Read More