ಉಡುಪಿ : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ ಶತಮಾನಗಳಿಂದ ಆರಾಧಿಸಲ್ಪಡುತ್ತಿರುವ ಪ್ರಸಿದ್ಧ ದೇವಾಲಯವಾಗಿದ್ದು, ಸದ್ಯ ಇಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಈ ನಡುವೆ ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ ಅವರು ಜೀರ್ಣೋದ್ದಾರ ನಡೆಯುತ್ತಿರುವ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.
ಸದ್ಯ ಸಿನಿಮಾ ಒಂದರ ಕೆಲಸದಲ್ಲಿ ಪೆರ್ಡೂರು ಆಸುಪಾಸು ತಂಗಿರುವ ರಕ್ಷಿತ್, ದೇಗುಲಕ್ಕೆ ತೆರಳಿ ಮುಷ್ಟಿ ಕಾಣಿಕೆ ಸಮರ್ಪಿಸಿದ್ದಾರೆ. ದೇವಾಲಯದ ಜೀರ್ಣೋದ್ಧಾರದ ವೇಳೆ ಮುಷ್ಟಿ ಕಾಣಿಕೆ ಸಮರ್ಪಿಸಿ ಕೈಜೋಡಿಸುವ ಪರಿಪಾಠ ಇದೆ.
ಹಲವು ಶತಮಾನಗಳ ಇತಿಹಾಸ ಇರುವ ಈ ಅನಂತಪದ್ಮನಾಭ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಮುಷ್ಟಿ ಕಾಣಿಕೆ ಅರ್ಪಿಸುವ ಮೂಲಕ ರಕ್ಷಿತ್ ಶೆಟ್ಟಿ ಭಾಗಿಯಾಗಿದ್ದಾರೆ. ದೇವಾಲಯದ ಸಿಬ್ಬಂದಿ ನಟನಿಗೆ ಸಾಥ್ ನೀಡಿದ್ದಾರೆ.
ಇದನ್ನೂ ಓದಿ : ಪುರಾಣ ಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ – ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

Author: Btv Kannada
Post Views: 236