BR​ ಪಾಟೀಲ್ ಬೆನ್ನಲ್ಲೇ ಶಾಸಕ ರಾಜು ಕಾಗೆ ಹೊಸ ಬಾಂಬ್‌ – ಅನುದಾನ ಕೊಡ್ಲಿಲ್ಲ ಅಂದ್ರೆ ಶಾಸಕ ಸ್ಥಾನಕ್ಕೆ ರಿಸೈನ್ ಕೊಡ್ತೀನಿ!

ಚಿಕ್ಕೋಡಿ: ವಸತಿ ಇಲಾಖೆಯಲ್ಲಿ ಭ್ರಷ್ಟಚಾರದ ಬಗ್ಗೆ ಸಚಿವ ಜಮೀರ್‌ ಆಪ್ತ ಕಾರ್ಯದರ್ಶಿಯೊಂದಿಗೆ ಶಾಸಕ ಬಿಆರ್ ಪಾಟೀಲ್ ಮಾತನಾಡಿದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಇದೀಗ ಕಾಂಗ್ರೆಸ್​ನ ಮತ್ತೊಬ್ಬ ಶಾಸಕ ರಾಜು ಕಾಗೆ ಸ್ವಪಕ್ಷದ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಚಿಕ್ಕೋಡಿಯಲ್ಲಿ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮಾತನಾಡಿ, ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ.  ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಕಿಡಿಕಾರಿದ್ದಾರೆ.

25 ಕೋಟಿ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. ಎರಡು ವರ್ಷ ಕಳೆದರೂ ವರ್ಕ್ ಆರ್ಡರ್ ನೀಡುತ್ತಿಲ್ಲ ಅಂದ್ರೆ ಏನರ್ಥ? ಇದರಿಂದ ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಅನುದಾನ ವಿಚಾರದಲ್ಲಿ 2 ದಿನದಲ್ಲಿ ರಾಜೀನಾಮೆ ಕೊಡ್ತೀನಿ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ : ಐಶ್ವರ್ಯ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ – ಡಿಕೆ ಸುರೇಶ್ ಸ್ಪಷ್ಟನೆ!

Btv Kannada
Author: Btv Kannada

Read More