ಬೆಂಗಳೂರು : ಐಶ್ವರ್ಯ ಗೌಡ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಂಸದ ಡಿ.ಕೆ.ಸುರೇಶ್ಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಹಾಗಾಗಿ ಇಂದು ಡಿ.ಕೆ.ಸುರೇಶ್ ED ವಿಚಾರಣೆಗೆ ಹಾಜರಾಗಿದ್ದರು. ಇದೀಗ ಬಂಗಾರಿ ಐಶ್ವರ್ಯಾ ಗೌಡಗೆ ಸೇರಿದ 3.98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿದೆ.
ಈ ಬಗ್ಗೆ ಇಡಿ ಅಧಿಕೃತವಾಗಿ ಮಾಹಿತಿ ನೀಡಿದ್ದು, ಐಶ್ವರ್ಯಾ ಗೌಡಗೆ ಸೇರಿದ 2.01 ಕೋಟಿ ರೂ. ಮೌಲ್ಯದ ಫ್ಲಾಟ್‌ಗಳು, ನಿರ್ಮಾಣ ಹಂತದ ಕಟ್ಟಡಗಳು ಮತ್ತು ಭೂಮಿ, 1.97 ಕೋಟಿ ರೂ. ಮೌಲ್ಯದ ನಗದು ಮತ್ತು ವಾಹನಗಳನ್ನು ED ಸೀಜ್ ಮಾಡಲಾಗಿದೆ ಎಂದು ತಿಳಿಸಿದೆ.
ತನಿಖೆ ವೇಳೆ ಐಶ್ವರ್ಯಾ ಗೌಡ ಅಕ್ರಮ ಹಣ ವರ್ಗಾವಣೆ ಮಾಡಿರೋದು ದೃಢವಾಗಿದ್ದು, ಐಶ್ವರ್ಯಾ ಚಿನ್ನ, ನಗದು ಮತ್ತು ಬ್ಯಾಂಕ್ ಖಾತೆಗಳ ಮೂಲಕ ಅನೇಕ ಜನರಿಂದ ಹಣ ಪಡೆದು ವಂಚಿಸಿದ್ದಾರೆ. ಈ ಮೂಲಕ ಅಕ್ರಮ ಹಣ ವರ್ಗಾವಣೆ ಅಪರಾಧದಲ್ಲಿ ಐಶ್ವರ್ಯ ಗೌಡ ಭಾಗಿಯಾಗಿದ್ದಾರೆ ಅನ್ನೋದು ತಿಳಿದುಬಂದಿದೆ.
ಇದನ್ನೂ ಓದಿ : ಹಾಡಹಗಲೇ ಯುವತಿಗೆ ಲೈಂಗಿಕ ಕಿರುಕುಳ & ಹಲ್ಲೆ – ಮನೆ ಬಳಿ ಹೋಗಿಯೂ ಪುಂಡರ ಗ್ಯಾಂಗ್ ಗಲಾಟೆ!
