ಬೀದರ್​ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಐವರು ಬೈಕ್ ಕಳ್ಳರು ಅರೆಸ್ಟ್!

ಬೀದರ್ : ಬೀದರ್​ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐವರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಖತರ್ನಾಕ್ ಕಳ್ಳರಿಂದ 5.95 ಲಕ್ಷ ಮೌಲ್ಯದ 14 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೀದರ್, ಔರಾದ್, ಮನ್ನಳ್ಳಿ, ಮತ್ತು ಬಗದಲ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಅರೆಸ್ಟ್ ಮಾಡಿದ್ದು, ವಶಪಡಿಸಿಕೊಂಡ ಬೈಕ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಬೈಕ್ ಕಳ್ಳರನ್ನು ಪತ್ತೆ ಹಚ್ಚಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಬಹುಮಾನ ವಿತರಿಸಿ ಅಭಿನಂದಿಸಿದರು.

ಇದನ್ನೂ ಓದಿ : ಬಹುಕೋಟಿ ವಂಚನೆ ಪ್ರಕರಣ – EDಯಿಂದ ಐಶ್ವರ್ಯ ಗೌಡಗೆ ಸೇರಿದ 3.98 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು!

Btv Kannada
Author: Btv Kannada

Read More