ಕಾರು ಓವರ್ ಟೇಕ್ ವಿಚಾರಕ್ಕೆ ಕಿರಿಕ್ – ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಹಾಗೂ ಬೆಂಬಲಿಗರಿಂದ ಗೂಂಡಾಗಿರಿ ಆರೋಪ!

ನೆಲಮಂಗಲ : ಉತ್ತರ ಕನ್ನಡ ಜಿಲ್ಲೆಯ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಹಾಗೂ ಅವರ ಬೆಂಬಲಿಗರು ಗೂಂಡಾಗಿರಿ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಓವರ್ ಟೇಕ್ ಮಾಡಿರೋ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್ ಹಾಗೂ ಚಾಲಕ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಇನೋವಾ ಕಾರು ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರನ್ನ ಓವರ್ ಟೇಕ್ ಮಾಡಿದ್ದಕ್ಕೆ ಗಲಾಟೆ ನಡೆದಿದೆ. ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಗಾಯಾಳು ದಾಬಸ್ ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ನೆಲಮಂಗಲ ಡಿವೈಎಸ್ ಪಿ ಕಚೇರಿಗೆ ಆಗಮಿಸಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ : ಬೀದರ್​ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಐವರು ಬೈಕ್ ಕಳ್ಳರು ಅರೆಸ್ಟ್!

Btv Kannada
Author: Btv Kannada

Read More