ಹಾವೇರಿ : ಹಾಡಹಗಲೇ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿಗ್ಗಾವಿ ಪಟ್ಟಣ ಹೋಡಾಂ ಶೋರೂಮ್ ಬಳಿ ನಡೆದಿದೆ. ಶಿವಾನಂದ ಕುಣ್ಣೂರು ಎಂಬಾತನನ್ನು ಅಪರಿಚಿತ ವ್ಯಕ್ತಿಗಳು ಜನಬೀಡ ಪ್ರದೇಶದಲ್ಲಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಆಸ್ತಿ ವ್ಯಾಜ್ಯ ಹಿನ್ನೆಲೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಶಿಗ್ಗಾವಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಭೀಭತ್ಸ ಕೊಲೆಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ : ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು – ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರು!

Author: Btv Kannada
Post Views: 300