ಪ್ರಪಾತದ ಬಳಿ ಬಸ್ ಪಲ್ಟಿ – ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಕಾರವಾರ : ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಡಿಕ್ಕಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ. 

ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ ಅರ್ಧದಲ್ಲೇ ನಿಂತಿದ್ದು, 25 ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿದೆ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನಭಕ್ಕೆ ಹಾರಿದ ಶುಭಾಂಶು ಶುಕ್ಲಾ.. 40 ವರ್ಷಗಳ ಬಳಿಕ ಬಾಹ್ಯಾಕಾಶಕ್ಕೆ ಭಾರತೀಯ ಗಗನಯಾತ್ರಿ!

Btv Kannada
Author: Btv Kannada

Read More