ರಾಮನಗರ : ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂಬ ದೃಢ ಸಂಕಲ್ಪವನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಆರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಅವರು ಮಾತನಾಡಿ ಅವರು, ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಸೋಲು ಗೆಲುವು ಸರ್ವೇ ಸಾಮಾನ್ಯ ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ವರ್ಧೆ ಮಾಡುವುದಾಗಿ ನಿಖಿಲ್ ಘೋಷಣೆ ಮಾಡಿದ್ದಾರೆ.
ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ : ಪಕ್ಷ ನಿಮ್ಮನ್ನು ಗುರುತಿಸಲಿದೆ. ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ರಾಜ್ಯ ಪ್ರವಾಸ ಹಮ್ಮಿಕೊಂಡಿರುವುದೇ ಜನರೊಂದಿಗೆ ಜನತಾದಳ ಎಂಬ ಅಭಿಯಾನದ ಭಾಗವಾಗಿ ಪ್ರತಿಯೊಬ್ಬ ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷವನ್ನು ಬಲಿಷ್ಠಗೊಳಿಸುವ ಗುರಿಯನ್ನು ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ : ಸೂರಜ್ ರೇವಣ್ಣಗೆ ಬಿಗ್ ರಿಲೀಫ್.. ಅನೈಸರ್ಗಿಕ ಲೈಂಗಿಕ ಆರೋಪ ಸುಳ್ಳು – ಸಿಐಡಿಯಿಂದ ಬಿ ರಿಪೋರ್ಟ್ ಸಲ್ಲಿಕೆ!
