ಮೈಸೂರು : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ಕಬಿನಿಯ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಿದ್ದು, ಪತ್ನಿ ಗೀತಾ ಅವರೊಂದಿಗೆ ದಟ್ಟ ಅರಣ್ಯದಲ್ಲಿ ಸಫಾರಿ ಮಾಡಿದ್ದಾರೆ.
ಬಿಡುವಿಲ್ಲದ ಸಿನಿಮಾ ಚಟುವಟಿಕೆಗಳ ಮಧ್ಯೆ ಶಿವಣ್ಣ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿರುವ ಪೋಟೋಗಳು ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
2 ದಿನಗಳಿಂದ ಕಬಿನಿಯಲ್ಲಿ ರಿಲ್ಯಾಕ್ಸ್ ಮೂಡ್ಗೆ ಜಾರಿರುವ ಶಿವಣ್ಣ , ಕಾಡಿನಲ್ಲಿ ರೌಂಡ್ಸ್ ಹೊಡೆಯುತ್ತಾ ಕಾಡಿನ ಮಕ್ಕಳ ಜೊತೆ ಎಂಜಾಯ್ ಮಾಡಿದ್ದಾರೆ. ಶಿವಣ್ಣನನ್ನು ನೋಡಿ ‘ಹಾಡಿ’ ಮಕ್ಕಳು ಖುಷಿ ಪಟ್ಟಿದ್ದಾರೆ. ಮಕ್ಕಳನ್ನು ಮಾತನಾಡಿಸುತ್ತಾ ಶಿವಣ್ಣ ಎಲ್ಲರಿಗೂ ಶೇಕ್ ಹ್ಯಾಂಡ್ ಕೊಟ್ಟಿದ್ದು, ಶಿವಣ್ಣ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಹಾಡಿ ಮಕ್ಕಳು ಸಂತಸಗೊಂಡಿದ್ದಾರೆ.
ಹಾಗೆಯೇ ಹೆಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿನ ಕಬಿನಿ ಡ್ಯಾಂಗೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಸದ್ಯ ಶಿವರಾಜ್ ಕುಮಾರ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರು ನಟಿಸುತ್ತಿದ್ದಾರೆ. ಕನ್ನಡದಲ್ಲಿ ‘ಆನಂದ್’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ‘45’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ತಮಿಳಿನ ‘ಜೈಲರ್ 2’ ಸಿನಿಮಾನಲ್ಲಿಯೂ ಶಿವಣ್ಣ ನಟಿಸಲಿದ್ದಾರೆ.
ಹಾಗೆಯೇ ತಮಿಳಿನಲ್ಲಿಯೂ ಒಂದು ಪ್ರತ್ಯೇಕ ಸಿನಿಮಾದಲ್ಲಿ ನಟಿಸಲಿದ್ದಾರೆ. ಇದೆಲ್ಲದರ ನಡುವೆ ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಅಭಿನಯಿಸಿದ್ದಾರೆ. ಇನ್ನು ಇತ್ತೀಚೆಗೆ ಶಿವಣ್ಣ ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆ ಭಾರತೀಯ ಚಿತ್ರರಂಗದ ಹಲವಾರು ಗಣ್ಯರು ನಟನ ಕುರಿತು ಪ್ರಶಂಸೆಯ ಮಳೆ ಹರಿಸಿದ್ದರು.
ಇದನ್ನೂ ಓದಿ : ಮೈಸೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ.. ಹಲವರಿಗೆ ಗಂಭೀರ ಗಾಯ!
