ಬೆಂಗಳೂರು : ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ವಾರ್ಷಿಕ ಸಭೆ ನಡೆಸಲಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಡಿಜಿಐಜಿಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಗೃಹ ಸಚಿವ ಪರಮೇಶ್ವರ್, ಗೃಹ ಇಲಾಖೆ ಕಾರ್ಯದರ್ಶಿ, ಡಿಜಿಐಜಿಪಿ ಡಾ. ಸಲೀಂ, ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಭಾಗಿಯಾಗಲಿದ್ದಾರೆ.
ಇನ್ನು, ADGP, ವಲಯ IGP, DIG, SP, ಬೆಂಗಳೂರು ಡಿಸಿಪಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ, ಅಪರಾಧ ಚಟುವಟಿಕೆ, ಮಂಗಳೂರು ಕೋಮು ಗಲಭೆ, ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಡಿಜಿಐಜಿಪಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಇದನ್ನೂ ಓದಿ : ಆಷಾಢ ಮಾಸದ ಮೊದಲ ಶುಕ್ರವಾರ – ನಾಡ ಅಧಿದೇವತೆಗೆ ವಿಶೇಷ ಅಲಂಕಾರ.. ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ!

Author: Btv Kannada
Post Views: 174