“ಜಸ್ಟ್ ಮ್ಯಾರೀಡ್” ಚಿತ್ರದ ‘ಕರುಣಾಕರ’ ಪಾತ್ರದಲ್ಲಿ ಖ್ಯಾತ ನಟ ಅಚ್ಯುತ್ ಕುಮಾರ್!

ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಟಿಸಿರುವ ಬಹುನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರವನ್ನು ಸಂಗೀತ ಸಂಯೋಜಕರಾಗಿ ಭಾರತದಾದ್ಯಂತ ಹೆಸರು ಮಾಡಿರುವ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಿಸಿದ್ದಾರೆ.

ಈ ಚಿತ್ರವನ್ನು ಸಿ.ಆರ್.ಬಾಬಿ ಅವರೆ ಮೊದಲ ಬಾರಿಗೆ ನಿರ್ದೇಶಿಸಿದ್ದು, ಭಾರತ ಚಿತ್ರರಂಗದ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಅಚ್ಯುತಕುಮಾರ್ ಅವರು “ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. “ಕರುಣಾಕರ” ಎಂಬ ಪಾತ್ರವನ್ನು ಅಚ್ಯುತ್ ಕುಮಾರ್ ನಿರ್ವಹಿಸಿದ್ದಾರೆ. ಅಚ್ಯುತಕುಮಾರ್ ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಪಾತ್ರದ ಕುರಿತು ಸಹ ಚಿತ್ರತಂಡ ಮಾಹಿತಿ ನೀಡಿತ್ತು. ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ಅನುಭವಿ ಕಲಾವಿದರು ಸಂಗಮದಲ್ಲಿ ಮೂಡಿಬಂದಿರುವ ʼಜಸ್ಟ್ ಮ್ಯಾರೀಡ್ʼ ಚಿತ್ರವನ್ನು ಆದಷ್ಟು ಬೇಗ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ : “ಮೈಸಾ” ಚಿತ್ರದ ಫಸ್ಟ್‌ ಲುಕ್‌ ರಿಲೀಸ್ – ವಿಭಿನ್ನ ಅವತಾರದಲ್ಲಿ ನಟಿ ರಶ್ಮಿಕಾ ಮಂದಣ್ಣ!

Btv Kannada
Author: Btv Kannada

Read More